ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ತೂಗುತಿದೆ ನಿಜ ಬೈಲಲಿ



ತೂಗುತಿದೆ ನಿಜ ಬೈಲಲಿ
ಜೋಕಾಲಿ -ಜೋಲಿ- ಲಾಲಿ   ||ಪ||

ಸಾಂಬಲೋಕದ ಮಧ್ಯದಿ ಸವಿಗೊಂಡು
ಕಂಬ ಸೂತ್ರದ ಸಾಧ್ಯದಿ
ಅಂಬರದೊಳವತಾರ ತುಂಬಿ ತುಳುಕುವಂತೆ
ಸಾಂಬ ಸಾಕ್ಷತ್ ಜೋಕಾಲಿ -ಜೋಲಿ- ಲಾಲಿ         ||೧||

ಪೊಡವಿಗಡಗಿರ್ದ ಜ್ಯೋತಿ
ಮೃಡನಿರ್ದು ತಾನಾಗಿ ಬಿಳಿಯ ಬತ್ತಿ
ಪೊಡವಿ ಆಕಾಶ ತಾನೇಕವಾಗಿ
ಒಡೆಯ ಕರ್ತುಕನ ಜೋಕಾಲಿ -ಜೋಲಿ- ಲಾಲಿ       ||೨||

ಹೊಳೆವ ಮಹಾಬೆಳಕಿನಲ್ಲಿ
ಕಳೆಯುಳ್ಳ ತಿಳಿನೀರ ತೊಟ್ಟಿಲಲ್ಲಿ
ಇಳೆಯೊಳು ಶಿಶುನಾಳಧೀಶನ ಮನದೊಳು
ಹೊಳೆವ ಕೈವಲ್ಯ ಜೋಕಾಲಿ -ಜೋಲಿ- ಲಾಲಿ       ||೩||

ಸಾಹಿತ್ಯ: ಶಿಶುನಾಳ ಷರೀಫರು
At Kukkarahalli Lake, Mysore on 29.11.2013


 

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ