ನೀ ಮಾಯೆಯೊಳಗೊ
ನೀ ಮಾಯೆಯೊಳಗೊ
ನಿನ್ನೊಳು ಮಾಯೆಯೊ
ನೀ ದೇಹದೊಳಗೊ
ನಿನ್ನೊಳು ದೇಹವೊ
ಬಯಲು ಆಲಯದೊಳಗೊ
ಆಲಯವು ಬಯಲೊಳಗೊ
ಬಯಲು ಆಲಯವೆರಡು
ನಯನದೊಳಗೊ
ನಯನ ಬುದ್ಧಿಯೊಳಗೊ
ಬುದ್ಧಿ ನಯನದೊಳಗೊ
ನಯನ ಬುದ್ಧಿಗಳೆರಡು
ನಿನ್ನೊಳಗೊ ಹರಿಯೆ
ಸವಿಯು ಸಕ್ಕರೆಯೊಳಗೊ
ಸಕ್ಕರೆಯು ಸವಿಯೊಳಗೊ
ಸವಿಯು ಸಕ್ಕರೆಗಳೆರಡು
ಜಿಹ್ವೆಯೊಳಗೊ
ಜಿಹ್ವೆ ಮನಸಿನೊಳಗೊ
ಮನಸು ಜಿಹ್ವೆಯೊಳಗೊ
ಜಿಹ್ವೆ ಮನಸುಗಳೆರಡು
ನಿನ್ನೊಳಗೊ ಹರಿಯೆ
ಕುಸುಮದೊಳು ಗಂಧವೊ
ಗಂಧದೊಳು ಕುಸುಮವೊ
ಕುಸುಮ ಗಂಧಗಳೆರಡು
ಘ್ರಾಣದೊಳಗೊ
ಅಸಮಭವ ಕಾಗಿನೆಲೆಯಾದಿಕೇಶವರಾಯ
ಉಸುರಲೆನ್ನಳವಲ್ಲ ಎಲ್ಲ
ನಿನ್ನೊಳಗೊ
ಸಾಹಿತ್ಯ: ಕನಕದಾಸರು
Photo: At Jumeira Islands, Dubai on 24.12.2022
ಕಾಮೆಂಟ್‌ಗಳು