ಶ್ರೀಶಾರದಾದೇವಿ
ಶ್ರೀಶಾರದಾದೇವಿ ಹೇ ಮಹಾಮಾತೆ
ಶ್ರೀರಾಮಕೃಷ್ಣ ಗುರುದೇವ ಸಂಪ್ರೀತೆ |
ಪರಮಪಾವನ ಹೃದಯೆ ಕಲಿಯುಗದ ಸೀತೆ
ಭಕ್ತಿಯಿಂದಾರಾಧಿಪೆವು ನಿನ್ನನಮ್ಮ||
ಗಗನದಂತಿಹುದಮ್ಮ ನಿನ್ನ ಗಾಂಭೀರ್ಯ
ನಿನ್ನ ತೇಜದ ಭಾಗವೀ ನಮ್ಮ ಸೂರ್ಯ |
ನೀ ಕಾಳಿ ನೀ ಲಕ್ಷ್ಮಿ ನೀ ಬಿಜ್ಜೆಯಮ್ಮ
ಮಕ್ಕಳಾಗಿಹ ನಮ್ಮ ಪೊರೆ ಶಕ್ತಿಯಮ್ಮ ||
ಮಹಿಮೆ ಮಹಿಮೆಯನರಿವುದೆಂದೆಂಬರಮ್ಮ |
ಗುರುವರ್ಯನಂ ತಿಳಿದ ನೀ ಮಹಿಮಳಮ್ಮ
ಪತಿಭಕ್ತಿಯದೆ ಮುಕ್ತಿ
ನಿನಗಾಯಿತಮ್ಮ
ಪರಶಕ್ತಿ ನೀನಮ್ಮ ನಮ್ಮ ಸಲಹಮ್ಮ ||
ನಿನ್ನ ನಾಮವೆ ಜನನಿ ಸುರನದಿಯ ತೀರ್ಥ |
ಎಲೆ ತಾಯೆ, ನೀನೇ ಪವಿತ್ರತಮ ತೀರ್ಥ |
ನಿನ್ನ ಪೂಜೆಯೆ ಭಕ್ತಿ, ಸಾಧನ ವಿರಕ್ತಿ
ನಿನ್ನ ನೆನೆವುದೆ ನಮಗೆ ಗುರು ತಪಶ್ಯಕ್ತಿ ||
ಸಾಹಿತ್ಯ: ಕುವೆಂಪು
ಕಾಮೆಂಟ್‌ಗಳು