ದಿವ್ಯ ಘಳಿಗೆ
ಬಂಗಾರ ನೀರ ಕಡಲಾಚೆಗೀಚೆಗಿದೆ ನೀಲ ನೀಲ ತೀರ
ಮಿಂಚು ಬಳಗ ತೆರೆತೆರೆಗಳಾಗಿ ಅಲೆಯುವುದು ಪುಟ್ಟ ಪೂರ
ಅದು ನಮ್ಮ ಊರು ಇದು ನಿಮ್ಮ ಊರು ತಮ್ ತಮ್ಮ ಊರೋ ಧೀರ
ಅದರೊಳಗೆ ನಾವು ನಮ್ಮೊಳಗೆ ತಾವು ಅದು ಇಲ್ಲವಣ್ಣ ದೂರ
ಕರೆ ಬಂದಿತಣ್ಣ ತೆರೆ ಬಂದಿತಣ್ಣ ನೆರೆ ಬಂದಿತಣ್ಣ ಬಳಿಗೆ
ಹರಿತದ ಭಾವ ಬೇರಿತದಾ ಜೀವ ಅದರೊಳಗೆ ಒಳಗೆ ಒಳಗೆ
ಇದೆ ಸಮಯವಣ್ಣ ಇದೆ ಸಮಯ ತಮ್ಮ ನಮ್ ನಿಮ್ಮ ಆತ್ಮಗಳಿಗೆ
ಅಂಬಿಗನು ಬಂದ ನಂಬಿಗನು ಬಂದ ಬಂದದಾ ದಿವ್ಯ ಘಳಿಗೆ
ಇದು ಉಪ್ಪು ನೀರ ಕಡಲಲ್ಲೋ ನಮ್ಮ ಒಡಲಲ್ಲು ಇದರ ನೆಲೆಯು
ಕಂಡವರಿಗಲ್ಲೊ ಕಂಡವರಿಗಷ್ಟೇ ತಿಳಿದದಾ ಇದರ ಬೆಲೆಯು
ಸಿಕ್ಕಲ್ಲಿ ಅಲ್ಲ ಸಿಕ್ಕಲ್ಲೆ ಮಾತ್ರ ಒಡೆಯುವುದು ಇದರ ಸೆಲೆಯು
ಕಣ್ ಅರಳಿದಾಗ ಕಣ್ ಹೊರಳಿದಾಗ ಹೊಳೆಯುವುದು ಇದರ ಕಳೆಯು
ಬಂದವರ ಬಳಿಗೆ ಬಂದದ ಮತ್ತು ನಿಂದವರಾ ನೆರೆಗೂ ಬಂದದೋ ಬಂದದ
ನವ ಮನು ಬಂದ ಹೊಸ ದ್ವೀಪಗಳಿಗೆ ಹೊರಟಾನ ಬನ್ನಿ ಅಂದದೋ ಅಂದದ
(ಅಂಬಿಕಾತನಯ ದತ್ತರ ಕವಿತೆ - ಯಾವ ಪದವನ್ನೂ ಬಿಡಲು ಮನಸ್ಸು ಬರುತ್ತಿಲ್ಲ)
There is something beyond all this golden water in blue shores, that belongs to us and that is within us which is divine. That is not an ocean of salt water, the very source of our existence lies there. Just by seeing it you cannot get its value, only those who had seen it know its value. This is bit of a jist in this poem by our all time great poet Da. Ra. Bendre.
Photo @ Kukkarahalli Lake, Mysore on 28.07.2013

ಕಾಮೆಂಟ್‌ಗಳು