ಕಟಗೇರಿ ದಾಸರು
ಕಟಗೇರಿ ದಾಸರು ನಮನ 🌷🙏🌷
Respects to departed soul Great musician Katageri Dasaru 🌷🙏🌷
ನಾಡಿನ ಗಮಕ ಮತ್ತು ಕೀರ್ತನಾ ಕ್ಷೇತ್ರ ಕಂಡ ಅಪರೂಪದ ವಿದ್ವನ್ಮಣಿ ಅನಂತಾಚಾರ್ಯ ಬಾಳಾಚಾರ್ಯ ಕಟಗೇರಿ ದಾಸರು ನಿಧನರಾದ ಸುದ್ದಿ ಬಂದಿದೆ.
ಸಾವಿರಾರು ದಾಸರ ಪದಗಳ ಅಪೂರ್ವ ಭಂಡಾರವೆನಿಸಿದ್ದ ಹರಿದಾಸ ಕೀರ್ತನಾ ಶಿರೋಮಣಿ, ಧಾರವಾಡದ ಮಾಳಮಡ್ಡಿಯ ಕಟಗೇರಿಯವರಾದ ಅನಂತಾಚಾರ್ಯರು ಸಂಗೀತ ಆಚಾರ್ಯರೆಂದೇ ಹೆಸರಾಗಿದ್ದರು. ದಾಸರಪದ ಗಾಯನದ ಜತೆಗೆ ಅವುಗಳ ಅರ್ಥ, ಸಂದರ್ಭ, ಔಚಿತ್ಯ, ಪೌರಾಣಿಕ, ಪಾರಮಾರ್ಥಿಕ ಹಿನ್ನೆಲೆ, ಕತೆ-ಉಪಕತೆ ವಿವರಿಸುತ್ತಿದ್ದ ಇವರ ಜ್ಞಾನ ವಿಶಾಲವಾದುದಾಗಿತ್ತು. ದಾಸಸಾಹಿತ್ಯದ ಅನನ್ಯ ಪ್ರಚಾರಕರಾಗಿದ್ದ ದಾಸರು, ಕಂಚಿನ ಕಂಠ, ಸುಶ್ರಾವ್ಯ ಗಾಯನ, ಸ್ವರಗಳ ಮೇಲಿನ ಕರಾರುವಾಕ್ ಹಿಡಿತ, ಸ್ವರಶುದ್ಧಿ, ಭಾವಶುದ್ಧಿಯ ಪಂಡಿತೋತ್ತಮರೆನಿಸಿದ್ದರು. 19 ಪ್ರಕಾರಗಳ ದಾಸಸಾಹಿತ್ಯದ ನಾಲ್ಕು ಸಾವಿರಕ್ಕೂ ಅಧಿಕ ದಾಸರ ಪದಗಳ ಭಂಡಾರ ಇವರದಾಗಿತ್ತು.
ಸಾವಿರಾರು ಸಂಗೀತಾಸಕ್ತರಿಗೆ ಸ್ವರಜ್ಞಾನ ಧಾರೆಯೆರೆದ ಗುರುವೆನಿಸಿದ್ದ ಕಟಗೇರಿ ದಾಸರು ಮನೆಮನೆಗೆ ತೆರಳಿ ಮಕ್ಕಳಿಗೆ ದಾಸರ ಪದ ಕಲಿಸಿದ ಮಹಾನುಭಾವರು. ಹರಿದಾಸ ಸೇವೆಯಲ್ಲಿ ಬದುಕಿನ ಸಾರ್ಥಕತೆ ಕಂಡುಕೊಂಡ ಜ್ಞಾನವೃದ್ಧರಿವರು.
99 ವರ್ಷ ವಯಸ್ಸಿನ ಕಟಗೇರಿ ದಾಸರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಬಲಭೀಮ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಸಂದಿದ್ದವು.
ಕಾಮೆಂಟ್‌ಗಳು