ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಪೆನ್ನ ಓಬಳಯ್ಯ


 ವೀಣೆ ತಯಾರಕ ಪೆನ್ನ ಓಬಳಯ್ಯ ನಿಧನ

Respects to departed soul Great Craftsman known for making Veena Instrument

ಮೊನ್ನೆ 2025 ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ್ದ ಶತಾಯುಷಿ ವೀಣೆ ತಯಾರಕ ಪೆನ್ನ ಓಬಳಯ್ಯ ಅವರು ನಿನ್ನೆ ರಾತ್ರಿ ನಿಧನರಾಗಿದ್ದಾರೆ.  ಅವರಿಗೆ 103 ವರ್ಷ ವಯಸ್ಸಾಗಿತ್ತು.

ದೊಡ್ಡಬಳ್ಳಾಪುರ ತಾಲೂಕಿನ ಮಧುರೈ ಸಮೀಪದ ಸಿಂಪಾಡಿಪುರದ ನಿವಾಸಿಯಾಗಿದ್ದ ಓಬಳಯ್ಯ ಅವರು ಇಡೀ ದೇಶಕ್ಕೆ ವೀಣೆ ತಯಾರಿಸಿ ಸರಬರಾಜು ಮಾಡುತ್ತಿದ್ದವರು. ಜೊತೆಗೆ ಆಸಕ್ತರಿಗೆ ವೀಣೆ ತಯಾರಿಕೆಯ ಕೌಶಲ್ಯವನ್ನು ಕಲಿಸಿ, ಸಾಂಪ್ರದಾಯಿಕ ಸಾಹಿತ್ಯದ ನಿರಂತರತೆಯನ್ನು ಕಾಪಾಡುವಲ್ಲಿ ಶ್ರಮಿಸಿದ್ದ ಮಹನೀಯರು.

ಸುಮಾರು ಐವತ್ತು ವರ್ಷಗಳ ಹಿಂದೆ ಪೆನ್ನ ಓಬಳಯ್ಯ ಅವರು ಸಿಂಪಾಡಿಪುರದಲ್ಲಿ ವೀಣೆ ತಯಾರಿಕೆಯ ಕಸುಬು ಪ್ರಾರಂಭಿಸಿದರು. ಇವರು ಮೈಸೂರು ವೀಣೆ ತಯಾರಿಸುವುದರಲ್ಲಿ ಪರಿಣಿತರಾಗಿದ್ದರು. ತನ್ನ ನಂತರವೂ ಈ ಕರಕುಶಲತೆ ಮುಂದುವರೆಯಬೇಕು ಎಂಬ ಸದುದ್ದೇಶದಿಂದ ಪೆನ್ನ ಓಬಳಯ್ಯ ಅವರು ಗ್ರಾಮದ ಹಲವು ಮಂದಿಗೂ ಈ ಕಲೆ ಕಲಿಸಿದರು. ಹೀಗೆ ಆ ಗ್ರಾಮದ ಸುಮಾರು ಕುಟುಂಬಗಳು ವಂಶಪಾರಂಪರ್ಯವಾಗಿ ವೀಣೆ ಮತ್ತು ತಂಬೂರಿ ತಯಾರಿಕೆಯಲ್ಲಿ ತೊಡಗಿವೆ.

ಮೊನ್ನೆ ಪ್ರಶಸ್ತಿ ಸ್ವೀಕರಿಸಲು ಬಂದ ಪೆನ್ನ ಓಬಳಯ್ಯ ಅಸ್ವಸ್ಥರಾಗಿದ್ದರು. ಅವರ ಪರವಾಗಿ ಅವರ ಮಕ್ಕಳು ಪ್ರಶಸ್ತಿ ಸ್ವೀಕಾರ ಮಾಡಿದ್ದರು.

ಅಗಲಿದ ಹಿರಿಯ ಕುಶಲಕರ್ಮಿಗೆ ನಮನ🌷🙏🌷

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ