ಅಂಕೇಗೌಡ
ಮೈಸೂರಿನ ಮಾಜಿ ಬಸ್ ಕಂಡಕ್ಟರ್, ಪುಸ್ತಕ ಪ್ರೇಮಿ ಅಂಕೇಗೌಡ ಅವರಿಗೆ 'ಪದ್ಮಶ್ರೀ' ಪ್ರಶಸ್ತಿ ಸಂದಿದೆ.
ಈ ಹಿಂದೆ ಬಸ್ ಕಂಡಕ್ಟರ್ ಆಗಿದ್ದ ಅಂಕೇಗೌಡ ಅವರು, ಪುಸ್ತಕಗಳೇ ತಮ್ಮ ಪ್ರಪಂಚ ಎಂದುಕೊಂಡು 20 ಭಾಷೆಗಳಲ್ಲಿ ಎರಡು ದಶಲಕ್ಷಕ್ಕೂ ಹೆಚ್ಚು ಪುಸ್ತಕಗಳು ಇರುವ ವಿಶ್ವದ ಅತಿದೊಡ್ಡ ಉಚಿತ-ಪ್ರವೇಶದ ಗ್ರಂಥಾಲಯವಾದ ‘ಪುಸ್ತಕ ಮನೆ’ ಅನ್ನು ಸ್ಥಾಪಿಸಿದ್ದಾರೆ.
ಮಂಡ್ಯದ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯಲ್ಲಿರುವ 'ಪುಸ್ತಕದ ಮನೆ'ಯನ್ನು ಸಾರ್ವಜನಿಕರಿಗಾಗಿ ತೆರೆದಿಟ್ಟಿರುವ ಎಂ. ಅಂಕೇ ಗೌಡರು, ಪುಸ್ತಕ ಅಲ್ಲದೇ ನಾಣ್ಯ, ಅಂಚೆ ಚೀಟಿ ಮತ್ತು ಲಗ್ನಪತ್ರಿಕೆಗಳ ಅಪರೂಪದ ಸಂಗ್ರಹವನ್ನು ಹೊಂದಿದ್ದಾರೆ.

ಕಾಮೆಂಟ್‌ಗಳು