ಅಗ್ರಹಾರ ಕೃಷ್ಣಮೂರ್ತಿ
ಅಗ್ರಹಾರ ಕೃಷ್ಣಮೂರ್ತಿ
ಅಗ್ರಹಾರ ಕೃಷ್ಣಮೂರ್ತಿ ಅವರು ಲೇಖಕರಾಗಿ ಮತ್ತು ಸಮಾಜವಾದಿ ಆಂದೋಲನದ ಕಾರ್ಯಕರ್ತರಾಗಿ ಹೆಸರಾದವರು.
ಅಗ್ರಹಾರ ಕೃಷ್ಣಮೂರ್ತಿ ಅವರು
1953ರ ಜನವರಿ 18ರಂದು, ತುಮಕೂರು ಜಿಲ್ಲೆಯ ಜೆಟ್ಟಿ ಅಗ್ರಹಾರದಲ್ಲಿ ಜನಿಸಿದರು.
ಎಪ್ಪತ್ತರ ದಶಕದಲ್ಲಿ ಹಲವು ಎಳೆಯ ಲೇಖಕರನ್ನು ಬೆಳೆಸಿದ ಸಮಾಜವಾದಿ ಯುವಜನ ಸಭಾದಲ್ಲಿ ಎಂ.ಡಿ. ನಂಜುಂಡಸ್ವಾಮಿ, ಲಂಕೇಶ್, ಗೋಪಾಲಗೌಡರ ಶಿಷ್ಯರಾಗಿದ್ದ ಅಗ್ರಹಾರ ಕೃಷ್ಣಮೂರ್ತಿ ಅವರು ಬೆಂಗಳೂರಿನಲ್ಲಿ ಕನ್ನಡ ಎಂ.ಎ. ಪದವೀಧರರು. ಒಂದೆರಡು ವರ್ಷ ಕಾಶಿ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿದ್ದರು. ಕೆಲವು ವರ್ಷ ಆಕಾಶವಾಣಿಯಲ್ಲಿ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.
ಅಗ್ರಹಾರ ಕೃಷ್ಣಮೂರ್ತಿ ಅವರು ತುಮಕೂರು ಜಿಲ್ಲೆಯ ಜಾನಪದ ಆಚರಣೆಯೊಂದನ್ನು ಅಧ್ಯಯನ ಮಾಡಿ ’ಬೆಳ್ದಿಂಗ್ಳಪ್ಪನ ಪೂಜೆ” ಕೃತಿ ಪ್ರಕಟಿಸಿದ್ದರು. ಇವರ ‘ನೀರು ಮತ್ತು ಪ್ರೀತಿ’ ಕಾದಂಬರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ಸಂದಿತ್ತು. ಇವರ ಸಾಹಿತ್ಯ ಸೇವೆಗೆ ರಾಜ್ಯೋತ್ಸವ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ, 2022ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪುರಸ್ಕಾರ ಸೇರಿದಂತೆ ಹಲವಾರು ಪ್ರಶಸ್ತಿ ಗೌರವಗಳು ಸಂದಿವೆ. ನಾಡವರ್ಗಳ್, ಬಹುವಚನ, ಕಾಲ್ದಾರಿ (ವಿಮರ್ಶೆ), ಸಾಂಗತ್ಯ (ಸಂಪಾದನೆ) , ದಾರಾಶಿಖೋ, ರೆಕ್ಕೆಯಿಲ್ಲದ ಹಕ್ಕಿ (ಅನುವಾದ) ಇವರ ಇತರ ಕೃತಿಗಳಲ್ಲಿ ಸೇರಿವೆ.
ಹಿರಿಯರಾದ ಅಗ್ರಹಾರ ಕೃಷ್ಣಮೂರ್ತಿ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಹಾರೈಕೆಗಳು. ನಮಸ್ಕಾರ.
On the birthday of writer Agrahara Krishnamurthy 🌷🙏🌷

ಕಾಮೆಂಟ್‌ಗಳು